1. दाऊद चोटी पर से थोड़ी दूर बढ़ गया था, कि मपीबोशेत का कर्मचारी मीबा एक जोड़ी, जीन बान्धे हुए गदहों पर दो सौ रोटी, किशमिश की एक सौ टिकिया, धूपकाल के फल की एक सौ टिकिया, और कुप्पी भर दाखमधु, लादे हुए उस से आ मिला।
1. ದಾವೀದನು ಬೆಟ್ಟದ ತುದಿಯಿಂದ ಸ್ವಲ್ಪ ದೂರಹೋದಾಗ ಇಗೋ, ಮೆಫೀಬೋ ಶೆತನ ಸೇವಕನಾದ ಚೀಬನು ತಡಿಹಾಕಿದ ಎರಡು ಕತ್ತೆಗಳನ್ನು ಹೊಡಕೊಂಡು ಬಂದು ಅವನನ್ನು ಎದುರು ಗೊಂಡನು; ಅವುಗಳ ಮೇಲೆ ಇನ್ನೂರು ರೊಟ್ಟಿ ಗಳೂ ಒಣಗಿದ ನೂರು ದ್ರಾಕ್ಷೇ ಗೊಂಚಲುಗಳೂ ವಸಂತಕಾಲದ ನೂರು ಹಣ್ಣುಗಳೂ ಒಂದು ಬುದ್ದಲಿ ದ್ರಾಕ್ಷಾರಸವೂ ಇದ್ದವು.