John - यूहन्ना 19 | View All

1. इस पर पीलातुस ने यीशु को लेकर कोड़े लगवाए।

1. ಆಗ ಪಿಲಾತನು ಯೇಸುವನ್ನು ತೆಗೆದುಕೊಂಡು ಆತನನ್ನು ಕೊರಡೆ ಯಿಂದ ಹೊಡಿಸಿದನು.

2. और सिपाहियों ने कांटों का मुकुट गूंथकर उसके सिर पर रखा, और उसे बैंजनी वस्त्रा पहिनाया।

2. ಸೈನಿಕರು ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಊದಾ ಬಣ್ಣದ ನಿಲುವಂಗಿಯನ್ನು ತೊಡಿಸಿ--

3. और उसके पास आ आकर कहने लगे, हे यहूदियों के राजा, प्रणाम! और उसे थप्पड़ मारे।
मीका 5:1

3. ಯೆಹೂದ್ಯರ ಅರಸನೇ, ವಂದನೆ! ಎಂದು ಹೇಳಿ ತಮ್ಮ ಕೈಗಳಿಂದ ಆತನನ್ನು ಹೊಡೆದರು.

4. तक पीलातुस ने फिर बाहर निकलकर लोगों से कहा, देखो, मैं उसे तुम्हारे पास फिर बाहर लाता हूं; ताकि तुम जानो कि मैं कुछ भी दोष नहीं पाता।

4. ಆದದರಿಂದ ಪಿಲಾತನು ತಿರಿಗಿ ಹೊರಕ್ಕೆ ಹೋಗಿ ಅವರಿಗೆ--ಇಗೋ, ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲವೆಂದು ನೀವು ತಿಳಿದುಕೊಳ್ಳುವ ಹಾಗೆ ಆತನನ್ನು ನಿಮ್ಮ ಮುಂದೆ ತರುತ್ತೇನೆ ಅಂದನು.

5. तक यीशु कांटों का मुकुट और बैंजनी वस्त्रा पहिने हुए बाहर निकला और पीलातुस ने उन से कहा, देखो, यह पुरूष।

5. ಆಗ ಯೇಸು ಮುಳ್ಳಿನ ಕಿರೀಟವನ್ನು ಮತ್ತು ಊದಾಬಣ್ಣದ ನಿಲುವಂಗಿಯನ್ನು ಧರಿಸಿಕೊಂಡವನಾಗಿ ಹೊರಗೆ ಬರಲು ಪಿಲಾತನು ಅವರಿಗೆ--ಇಗೋ, ಈ ಮನುಷ್ಯನು! ಅಂದನು.

6. जब महायाजकों और प्यादों ने उसे देखा, तो चिल्लाकर कहा, कि उसे क्रूस पर चढ़ा, क्रूस पर : पीलातुस ने उन से कहा, तुम ही उसे लेकर क्रूस पर चढ़ाओ; क्योंकि मैं उस में दोष नहीं पाता।

6. ಪ್ರಧಾನಯಾಜಕರೂ ಅಧಿಕಾರಿಗಳೂ ಆತನನ್ನು ನೋಡಿದಾಗ--ಅವನನ್ನು ಶಿಲುಬೆಗೆ ಹಾಕಿಸು, ಅವ ನನ್ನು ಶಿಲುಬೆಗೆ ಹಾಕಿಸು ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ಹೋಗಿ ಶಿಲುಬೆಗೆ ಹಾಕಿರಿ; ಯಾಕಂದರೆ ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ ಅಂದನು.

7. यहूदियों ने उस को उत्तर दिया, कि हमारी भी व्यवस्था है और उस व्यवस्था के अनुसार वह मारे जाने के योग्य है क्योंकि उस ने अपने आप को परमेश्वर का पुत्रा बनाया।
लैव्यव्यवस्था 24:16

7. ಯೆಹೂದ್ಯರು ಪ್ರತ್ಯುತ್ತರವಾಗಿ ಅವ ನಿಗೆ--ನಮ್ಮಲ್ಲಿ ಒಂದು ನ್ಯಾಯಪ್ರಮಾಣವಿದೆ ಮತ್ತು ನಮ್ಮ ಆ ನ್ಯಾಯಪ್ರಮಾಣದ ಪ್ರಕಾರ ಅವನು ಸಾಯಲೇಬೇಕು; ಯಾಕಂದರೆ ಅವನು ತನ್ನನ್ನು ದೇವರಮಗನೆಂದು ಮಾಡಿಕೊಂಡಿದ್ದಾನೆ ಅಂದರು.

8. जब पीलातुस ने यह बात सुनी तो और भी डर गया।

8. ಪಿಲಾತನು ಈ ಮಾತನ್ನು ಕೇಳಿದಾಗ ಇನ್ನೂ ಬಹಳವಾಗಿ ಭಯಪಟ್ಟನು.

9. और फिर किले के भीतर गया और यीशु से कहा, तू कहां का है? परन्तु यीशु ने उसे कुछ भी उत्तर न दिया।

9. ತಿರಿಗಿ ನ್ಯಾಯಾಲಯ ದೊಳಗೆ ಹೋಗಿ ಯೇಸುವಿಗೆ--ನೀನು ಎಲ್ಲಿಂದ ಬಂದವನು ಎಂದು ಆತನನ್ನು ಕೇಳಿದನು. ಆದರೆ ಯೇಸು ಅವನಿಗೆ ಉತ್ತರಕೊಡಲಿಲ್ಲ.

10. पीलातुस ने उस से कहा, मुझ से क्यों नहीं बोलता? क्या तू नहीं जानता कि तुझे छोड़ देने का अधिकार मुझे है और तुझे क्रूस पर चढ़ाने का भी मुझे अधिकार है।

10. ಆಗ ಪಿಲಾತನು ಆತನಿಗೆ--ನೀನು ನನ್ನ ಸಂಗಡ ಮಾತ ನಾಡುವದಿಲ್ಲವೋ? ನಾನು ನಿನ್ನನ್ನು ಶಿಲುಬೆಗೆ ಹಾಕಿಸುವದಕ್ಕೂ ನಿನ್ನನ್ನು ಬಿಡಿಸುವದಕ್ಕೂ ನನಗೆ ಅಧಿಕಾರವು ಉಂಟೆಂದು ನಿನಗೆ ತಿಳಿಯುವದಿಲ್ಲವೋ ಎಂದು ಕೇಳಿದನು.

11. यीशु ने उत्तर दिया, कि यदि तुझे ऊपर से न दिया जाता, तो तेरा मुझ पर कुछ अधिकार न होता; इसलिये जिस ने मुझे तेरे हाध पकड़वाया है, उसका पाप अधिक है।

11. ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.

12. इस से पीलातुस ने उसे छोड़ देना चाहा, परन्तु यहूदयों ने चिल्ला चिल्लाकर कहा, यदि तू इस को छोड़ देगा तो तेरी भक्ति कैसर की ओर नहीं; जो कोई अपने आप को राजा बनाता है वह कैसर का साम्हना करता है।

12. ಅಂದಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಪಟ್ಟನು. ಆದರೆ ಯೆಹೂದ್ಯರು--ನೀನು ಈ ಮನುಷ್ಯನನ್ನು ಹೋಗಗೊಡಿಸಿದರೆ ಕೈಸರನಿಗೆ ಸ್ನೇಹಿತನಲ್ಲ; ತನ್ನನ್ನು ಅರಸನನ್ನಾಗಿ ಮಾಡಿಕೊಳ್ಳು ವವನು ಕೈಸರನಿಗೆ ವಿರೋಧವಾಗಿ ಮಾತನಾಡುತ್ತಾನೆ ಎಂದು ಕೂಗಿ ಹೇಳಿದರು.

13. ये बातें सुनकर पीलातुस यीशु को बाहर लाया और उस जगह एक चबूतरा था जो इब्रानी में गब्बता कहलाता है, और न्याय आसन पर बैठा।

13. ಆದದರಿಂದ ಪಿಲಾತನು ಆ ಮಾತನ್ನು ಕೇಳಿ ಯೇಸುವನ್ನು ಹೊರಗೆ ಕರ ಕೊಂಡು ಬಂದು ಇಬ್ರಿಯ ಮಾತಿನಲ್ಲಿ ಗಬ್ಬಥಾ ಎನಿಸಿಕೊಳ್ಳುವ ಕಲ್ಲು ಹಾಸಿದ ಕಟ್ಟೆ ಎಂದು ಕರೆಯಲ್ಪಟ್ಟ ಸ್ಥಳದಲ್ಲಿ ನ್ಯಾಯಾಸನದ ಮೇಲೆ ಕೂತುಕೊಂಡನು.

14. यह फसह की तैयारी का दिन था और छठे घंटे के लगभग था: तब उस ने यहूदियों से कहा, देखो, यही है, तुम्हारा राजा!

14. ಅದು ಪಸ್ಕಕ್ಕೆ ಸಿದ್ಧಮಾಡುವ ದಿನದಲ್ಲಿ ಸುಮಾರು ಆರನೇ ತಾಸಾಗಿತ್ತು; ಅವನು ಯೆಹೂದ್ಯರಿಗೆ--ಇಗೋ, ನಿಮ್ಮ ಅರಸನು ಅಂದನು.

15. परन्तु वे चिल्लाए कि ले जा! ले जा! उसे क्रूस पर चढ़ा: पीलातुस ने उन से कहा, क्या मैं तुम्हारे राजा को क्रूस पर चढ़ाऊं? महायाजकों ने उत्तर दिया, कि कैसर को छोड़ हमारा और कोई राजा नहीं।

15. ಆದರೆ ಅವರು--ತೆಗೆದುಹಾಕು, ತೆಗೆದುಹಾಕು, ಅವನನ್ನು ಶಿಲುಬೆಗೆ ಹಾಕು ಅಂದರು. ಅದಕ್ಕೆ ಪಿಲಾತನು ಅವರಿಗೆ--ನಿಮ್ಮ ಅರಸನನ್ನು ಶಿಲುಬೆಗೆ ಹಾಕಲೋ ಅಂದಾಗ ಪ್ರಧಾನಯಾಜಕರು--ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರ ಕೊಟ್ಟರು.

16. तब उस ने उसे उन के हाथ सौंप दिया ताकि वह क्रूस पर चढ़ाया जाए।।

16. ಆಗ ಅವನು ಯೇಸುವನ್ನು ಶಿಲುಬೆಗೆ ಹಾಕಿಸುವದಕ್ಕೆ ಅವರಿಗೆ ಒಪ್ಪಿಸಲಾಗಿ ಅವರು ಆತನನ್ನು ಸಾಗಿಸಿಕೊಂಡು ಹೋದರು.

17. तब वे यीशु को ले गए। और वह अपना क्रूस उठाए हुए उस स्थान तक बाहर गया, जो खोपड़ी का स्थान कहलाता है और इब्रानी में गुलगुता।

17. ಆತನು ತನ್ನ ಶಿಲುಬೆಯನ್ನು ಹೊತ್ತುಕೊಂಡು ಕಪಾಲವೆಂದು ಕರೆಯಲ್ಪಟ್ಟ ಸ್ಥಳಕ್ಕೆ ಹೋದನು. ಅದು ಇಬ್ರಿಯ ಭಾಷೆಯಲ್ಲಿ ಗೊಲ್ಗೊಥಾ (ಬುರುಡೆಗಳ ಸ್ಥಳ) ಎಂದು ಕರೆಯಲ್ಪಡುತ್ತದೆ.

18. वहां उन्हों ने उसे और उसके साथ और दो मनुष्यों को क्रूस पर चढ़ाया, एक को इधर और एक को उधर, और बीच में यीशु को।

18. ಅಲ್ಲಿ ಇಬ್ಬರು ಅಂದರೆ ಆ ಕಡೆಗೊಬ್ಬನನ್ನೂ ಈ ಕಡೆಗೊಬ್ಬನನ್ನು ಮಧ್ಯೆ ಯೇಸುವನ್ನೂ ಇರಿಸಿ ಆತನೊಂದಿಗೆ ಶಿಲುಬೆಗೆ ಹಾಕಿದರು.

19. और पीलातुस ने एक दोष- पत्रा लिखकर क्रूस पर लगा दिया और उस में यह लिखा हुआ था, यीशु नासरी यहूदियों का राजा।

19. ಇದಲ್ಲದೆ ಪಿಲಾತನು ಒಂದು ಶಿರೋನಾಮವನ್ನು ಬರೆಯಿಸಿ ಅದನ್ನು ಶಿಲುಬೆಯ ಮೇಲೆ ಇರಿಸಿದನು. ಆ ಬರಹವು ಏನಂದರೆ--ಯೆಹೂದ್ಯರ ಅರಸನಾದ ನಜರೇತಿನ ಯೇಸು ಎಂಬದೇ.

20. यह दोष- पत्रा बहुत यहूदियों ने पढ़ा क्योंकि वह स्थान जहां यीशु क्रूस पर चढ़ाया गया था नगर के पास था और पत्रा इब्रानी और लतीनी और यूनानी में लिखा हुआ था।

20. ಈ ಶಿರೋನಾಮ ವನ್ನು ಯೆಹೂದ್ಯರಲ್ಲಿ ಅನೇಕರು ಓದಿದರು. ಯೇಸು ಶಿಲುಬೆಗೆ ಹಾಕಲ್ಪಟ್ಟ ಆ ಸ್ಥಳವು ಆ ಪಟ್ಟಣಕ್ಕೆ ಸವಿಾಪವಾಗಿತ್ತು. ಇದು ಇಬ್ರಿಯ ಗ್ರೀಕ್ ಮತ್ತು ಲ್ಯಾಟಿನ್ ಭಾಷೆಗಳಲ್ಲಿ ಬರೆಯಲ್ಪಟ್ಟಿತ್ತು.

21. तब यहूदियों के महायाजकों ने पीलातुस से कहा, यहूदियों का राजा मत लिख परन्तु यह कि 'उस ने कहा, मैं यहूदियों का राजा हूं'।

21. ಹೀಗಿರಲಾಗಿ ಯೆಹೂದ್ಯರ ಪ್ರಧಾನಯಾಜಕರು ಪಿಲಾತನಿಗೆ-- ಯೆಹೂದ್ಯರ ಅರಸನೆಂದು ಬರೆಯಬೇಡ; ಆದರೆ--ನಾನೇ ಯೆಹೂದ್ಯರ ಅರಸನಾಗಿದ್ದೇನೆ ಎಂದು ಅವನು ಹೇಳಿದನು ಎಂದು ಬರೆ ಅಂದರು.

22. पीलातुस ने उत्तर दिया, कि मैं ने जो लिख दिया, वह लिख दिया।।

22. ಪಿಲಾತನು ಪ್ರತ್ಯುತ್ತರವಾಗಿ--ನಾನು ಬರೆದದ್ದು ಬರೆದಾಯಿತು ಅಂದನು.

23. जब सिपाही यीशु को क्रूस पर चढ़ा चुके, तो उसके कपड़े लेकर चार भाग किए, हर सिपाही के लिये एक भाग और कुरता भी लिया, परन्तु कुरता बिन सीअन ऊपर से नीचे तक बुना हुआ था: इसलिये उन्हों ने आपस में कहा, हम इस को न फाडें, परन्तु इस पर चिट्ठी डालें कि वह किस का होगा।

23. ಸೈನಿಕರು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಆತನ ವಸ್ತ್ರಗಳನ್ನು ತೆಗೆದು ಪ್ರತಿಯೊಬ್ಬ ಸೈನಿಕ ನಿಗೆ ಒಂದೊಂದು ಭಾಗದಂತೆ ನಾಲ್ಕು ಭಾಗಗಳನ್ನಾಗಿ ಮಾಡಿಕೊಂಡರು. ಆತನ ಮೇಲಂಗಿಯನ್ನು ಸಹ ತಕ್ಕೊಂಡರು; ಆದರೆ ಆ ಅಂಗಿಯು ಹೊಲಿಗೆ ಇಲ್ಲದೆ ಮೇಲಿನಿಂದ ಉದ್ದಕ್ಕೂ ನೇಯ್ದದ್ದಾಗಿತ್ತು.

24. यह इसलिये हुआ, कि पवित्रा शास्त्रा की बात पूरी हो कि उन्हों ने मेरे कपड़े आपस में बांट लिये और मेरे वस्त्रा पर चिट्ठी डाली: सो सिपाहियों ने ऐसा ही किया।
भजन संहिता 22:18

24. ಆದದ ರಿಂದ ಅವರು--ನಾವು ಅದನ್ನು ಹರಿಯುವದು ಬೇಡ; ಆದರೆ ಅದು ಯಾರಿಗಾಗುವದೋ ಎಂದು ಅದಕ್ಕೋಸ್ಕರ ಚೀಟು ಹಾಕಿಕೊಳ್ಳೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು; ಹೀಗೆ--ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲುಮಾಡಿ ಕೊಂಡರು; ನನ್ನ ಮೇಲಂಗಿಗೋಸ್ಕರ ಚೀಟು ಹಾಕಿ ದರ

25. परन्तु यीशु के क्रूस के पास उस की माता और उस की माता की बहिन मरियम, क्लोपास की पत्नी और मरियम मगदलीनी खड़ी थी।

25. ಆಗ ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ ಆತನ ತಾಯಿಯ ಸಹೋದರಿಯೂ ಕ್ಲೋಫನ ಹೆಂಡತಿಯಾದ ಮರಿಯಳೂ ಮಗ್ದಲದ ಮರಿಯಳೂ ನಿಂತಿದ್ದರು.

26. यीशु ने अपनी माता से कहा; हे नारी, देख, यह तेरा पुत्रा है।

26. ತನ್ನ ತಾಯಿಯು ಮತ್ತು ತಾನು ಪ್ರೀತಿಸಿದ ಶಿಷ್ಯನು ಹತ್ತಿರದಲ್ಲಿ ನಿಂತಿರುವದನ್ನು ಯೇಸು ನೋಡಿ ತನ್ನ ತಾಯಿಗೆ--ಸ್ತ್ರೀಯೇ, ಇಗೋ, ನಿನ್ನ ಮಗನು ಅಂದನು.

27. तब उस चेले से कहा, यह तेरी माता है, और उसी समय से वह चेला, उसे अपने घर ले गया।।

27. ಆಮೇಲೆ ಆತನು ಆ ಶಿಷ್ಯನಿಗೆ--ಇಗೋ, ನಿನ್ನ ತಾಯಿಯು ಅಂದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲಿ ಸೇರಿಸಿಕೊಂಡನು.

28. इस के बाद यीशु ने यह जानकर कि अब सब कुछ हो चुका; इसलिये कि पवित्रा शास्त्रा की बात पूरी हो कहा, मैं प्यासा हूं।
भजन संहिता 22:15, भजन संहिता 69:21

28. ಇದಾದ ಮೇಲೆ ಯೇಸು ಆಗ ಎಲ್ಲವೂ ಪೂರೈಸಲ್ಪಟ್ಟಿತೆಂದು ತಿಳಿದು ಬರಹವು ನೆರವೇರು ವಂತೆ--ನನಗೆ ನೀರಡಿಕೆಯಾಗಿದೆ ಅಂದನು.

29. वहां एक सिरके से भरा हुआ बर्तन धरा था, सो उन्हों ने सिरके के भिगोए हुए इस्पंज को जूफे पर रखकर उसके मुंह से लगाया।
भजन संहिता 69:26, भजन संहिता 69:21

29. ಆಗ ಅಲ್ಲಿ ಹುಳಿರಸ ತುಂಬಿದ ಪಾತ್ರೆಯಿತ್ತು; ಅವರು ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಹಿಸ್ಸೋಪಿಗೆ ಸಿಕ್ಕಿಸಿ ಆತನ ಬಾಯಿಗೆ ಇಟ್ಟರು.

30. जब यीशु ने वह सिरका लिया, तो कहा पूरा हुआ और सिर झुकाकर प्राण त्याग दिए।।
अय्यूब 19:26-27

30. ಯೇಸು ಆ ಹುಳಿರಸವನ್ನು ತಕ್ಕೊಂಡ ಮೇಲೆ--ತೀರಿತು ಎಂದು ಹೇಳಿ ತನ್ನ ತಲೆಯನ್ನು ಬಾಗಿಸಿ ಆತ್ಮವನ್ನು ಒಪ್ಪಿಸಿಕೊಟ್ಟನು.

31. और इसलिये कि वह तैयारी का दिन था, यहूदियों ने पीलातुस से बिनती की कि उन की टांगे तोड़ दी जाएं और वे उतारे जाएं ताकि सब्त के दिन वे क्रूसों पर न रहें, क्योंकि वह सब्त का दिन बड़ा दिन था।
व्यवस्थाविवरण 21:22-23

31. ಅದು ಸಿದ್ಧತೆಯ ದಿನವಾದದ್ದರಿಂದ ಸಬ್ಬತ್ ದಿನದಲ್ಲಿ ದೇಹಗಳು ಶಿಲುಬೆಯ ಮೇಲೆ ಇರಬಾರ ದೆಂದು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಯೆಹೂದ್ಯರು ಪಿಲಾತನನ್ನು ಬೇಡಿಕೊಂಡರು. (ಯಾಕಂದರೆ ಆ ಸಬ್ಬತ್ದಿನವು ವಿಶೇಷವಾದ ದಿನವಾಗಿತ್ತು).

32. सो सिपाहियों ने आकर पहिले की टांगें तोड़ीं तब दूसरे की भी, जो उसके साथ क्रूसों पर चढ़ाए गए थे।

32. ಆಗ ಸೈನಿಕರು ಬಂದು ಆತನ ಜೊತೆಯಲ್ಲಿ ಶಿಲುಬೆಗೆ ಹಾಕಲ್ಪಟ್ಟಿದ್ದ ಮೊದಲನೆಯವನ ಕಾಲುಗಳನ್ನೂ ಮತ್ತೊಬ್ಬನ ಕಾಲುಗಳನ್ನೂ ಮುರಿದರು.

33. परन्तु जब यीशु के पास आकर देखा कि वह मर चुका है, तो उस की टांगें न तोड़ीं।

33. ಆದರೆ ಅವರು ಯೇಸುವಿನ ಬಳಿಗೆ ಬಂದಾಗ ಆತನು ಆಗಲೇ ಸತ್ತಿರುವದನ್ನು ಕಂಡು ಆತನ ಕಾಲುಗಳನ್ನು ಮುರಿ ಯಲಿಲ್ಲ.

34. परन्तु सिपाहियों में से एक ने बरछे से उसका पंजर बेधा और उस में से तुरन्त लोहू और पानी निकला।

34. ಆದರೆ ಸೈನಿಕರಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು; ಕೂಡಲೆ ರಕ್ತವೂ ನೀರೂ ಹೊರಗೆ ಬಂತು.

35. जिस ने यह देखा, उसी ने गवाही दी है, और उस की गवाही सच्ची है; और वह जानता है, कि सच कहता है कि तुम भी विश्वास करो।

35. ಅದನ್ನು ನೋಡಿದವನೇ ಸಾಕ್ಷಿ ಕೊಟ್ಟಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ನೀವು ನಂಬುವಂತೆ ಅವನು ಹೇಳುವದು ಸತ್ಯವೆಂದು ಅವನು ಬಲ್ಲನು.

36. ये बातें इसलिये हुईं कि पवित्रा शास्त्रा की यह बात पूरी हो कि उस की कोई हड्डी तोड़ी न जाएगी।
निर्गमन 12:46, गिनती 9:12, भजन संहिता 34:20

36. ಯಾಕಂದರೆ--ಆತನ ಒಂದು ಎಲುಬಾದರೂ ಮುರಿಯಲ್ಪಡಬಾರದು ಎಂಬ ಬರಹವು ನೆರವೇರುವಂತೆ ಇವುಗಳು ಸಂಭವಿಸಿದವು.

37. फिर एक और स्थान पर यह लिखा है, कि जिसे उन्हों ने बेधा है, उस पर दृष्टि करेंगे।।
जकर्याह 12:10

37. ತಿರಿಗಿ ಮತ್ತೊಂದು ಬರಹವು--ಅವರು ತಾವು ಇರಿದವನನ್ನು ನೋಡುವರು ಎಂದು ಹೇಳುತ್ತದೆ.

38. इन बातों के बाद अरमतियाह के यूसुफ ने, जो यीशु का चेला था, (परन्तु यहूदियों के डर से इस बात को छिपाए रखता था), पीलातुस से बिनती की, कि मैं यीशु की लोथ को ले जाऊं, और पीलातुस ने उस की बिनती सुनी, और वह आकर उस की लोथ ले गया।

38. ತರುವಾಯ ಯೆಹೂದ್ಯರ ಭಯದ ನಿಮಿತ್ತ ದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾ ಯದ ಯೋಸೇಫನು ಯೇಸುವಿನ ದೇಹವನ್ನು ತಾನು ತೆಗೆದುಕೊಂಡು ಹೋಗುವಂತೆ ಪಿಲಾತನನ್ನು ಬೇಡಿ ಕೊಂಡನು. ಆಗ ಪಿಲಾತನು ಅಪ್ಪಣೆಕೊಡಲು ಅವನು ಬಂದು ಆತನ ದೇಹವನ್ನು ತೆಗೆದುಕೊಂಡು

39. निकुदेमुस भी जो पहिले यीशु के पास रात को गया था पचास सेर के लगभग मिला हुआ गन्धरस और एलवा ले आया।

39. ಇದಲ್ಲದೆ ಮೊದಲು ಒಂದು ರಾತ್ರಿ ಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ಬೆರಸಿದ ರಕ್ತಬೋಳ ಅಗರುಗಳನ್ನು ನೂರು ಸೇರು ತೂಕದಷ್ಟು ತಕ್ಕೊಂಡು ಅಲ್ಲಿಗೆ ಬಂದನು.

40. तब उन्हों ने यीशु की लोथ को लिया और यहूदियों के गाड़ने की रीति के अनुसार उसे सुगन्ध द्रव्य के साथ कफन में लपेटा।

40. ಆಗ ಅವರು ಯೇಸುವಿನ ದೇಹವನ್ನು ತಕ್ಕೊಂಡು ಯೆಹೂದ್ಯರಲ್ಲಿ ಹೂಣಿಡುವ ಪದ್ಧತಿಯ ಪ್ರಕಾರ ಅದನ್ನು ಸುಗಂಧದ್ರವ್ಯಗಳೊಂದಿಗೆ ನಾರು ಬಟ್ಟೆಗಳಲ್ಲಿ ಸುತ್ತಿದರು.

41. उस स्थान पर जहां यीशु क्रूस पर चढ़ाया गया था, एक बारी थी; और उस बारी में एक नई कब्र थी; जिस में कभी कोई न रखा गया था।

41. ಆತನು ಶಿಲುಬೆಗೆ ಹಾಕಲ್ಪಟ್ಟ ಸ್ಥಳದಲ್ಲಿ ಒಂದು ತೋಟವಿತ್ತು; ಆ ತೋಟದಲ್ಲಿ ಯಾರನ್ನೂ ಇಡದೆ ಇದ್ದ ಒಂದು ಸಮಾಧಿಯು ಇತ್ತು.ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದ ಅವರು ಯೇಸುವನ್ನು ಸಮಾಧಿಯಲ್ಲಿ ಇಟ್ಟರು. ಯಾಕಂದರೆ ಆ ಸಮಾಧಿಯು ಸವಿಾಪದಲ್ಲಿತ್ತು.

42. सो यहूदियों की तैयारी के दिन के कारण, उन्हों ने यीशु को उसी में रखा, क्योंकि वह कब्र निकट थी।।

42. ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದ ಅವರು ಯೇಸುವನ್ನು ಸಮಾಧಿಯಲ್ಲಿ ಇಟ್ಟರು. ಯಾಕಂದರೆ ಆ ಸಮಾಧಿಯು ಸವಿಾಪದಲ್ಲಿತ್ತು.



Shortcut Links
यूहन्ना - John : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |